ಐಎನ್ ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರ ರೂ 11.04 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ.

ಜಪ್ತಿ ಮಾಡಲಾಗಿರುವ ನಾಲ್ಕು ಆಸ್ತಿಯಲ್ಲಿ ಕೊಡಗಿನ ಕುಟ್ಟ ಬಳಿಯಿರುವ ಕಾಫಿ ತೋಟವನ್ನು ವಶಕ್ಕೆ ಪಡೆಯಲಾಗಿದೆ.ಕಾರ್ತಿ ಚಿದಂಬರಂ ತಮಿಳುನಾಡಿನ ಶಿವಗಂಗಾ ಕ್ಷೇತ್ರದ ಸಂಸದರಾಗಿದ್ದು, ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರ ಪುತ್ರರಾಗಿದ್ದಾರೆ.