ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಾಗಿದ್ದ ಕಾರಣ ಕುಶಾಲನಗರ ತಾಲ್ಲೂಕಿನ ದುಬಾರೆ ಸಾಕಾನೆ ಶಿಬಿರಕ್ಕೆ ಪ್ರವಾಸಿಗರ ಪ್ರವೇಶದ ನಿರ್ಬಂಧ ವನ್ನು ಇಂದಿನಿಂದ ತೆರವುಗೊಳಿಸಲಾಗಿದ್ದು,ನದಿಯಲ್ಲಿ ನೀರಿನ ಪ್ರಮಾಣ ಇಳಿಕೆಯಾದ ಕಾರಣ ಎಂದಿನಂತೆ ಆನೆ ಶಿಬಿರಕ್ಕೆ ಪ್ರವಾಸಿಗರು ಭೇಟಿ ನೀಡಬಹುದು ಎಂದು ಅರಣ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.