ಶ್ರೀ ಕ್ಷೇತ್ರ ಧರ್ಮಸ್ಥಳ ಹೆಸರಿಗೆ ಅಪಪ್ರಚಾರ ವಿರುದ್ಧ ಹಾಗೂ ಇದನ್ನು ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿರುವ ಧೋರಣೆಯನ್ನು ಖಂಡಿಸಿ ಭಾರತೀಯ ಜನತಾ ಪಕ್ಷ ಕರೆ ರಾಜ್ಯಾಧ್ಯoತ ಕರೆ ನೀಡಿರುವ ಪ್ರತಿಭಟನೆ ಹಿನ್ನಲೆ ಇಂದು ಕೊಡಗು ಬಿಜೆಪಿ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿತು.ಪಕ್ಷದ ಜಿಲ್ಲಾಧ್ಯಕ್ಷ ನಾಪoಡ ರವಿ ಕಾಳಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ಹೊರ ಹಾಕಿದರು.ಇನ್ನು ಶನಿವಾರಸಂತೆಯಲ್ಲಿ ಶ್ರೀ ಮಂಜುನಾಥ ಸ್ವಾಮಿ ಮತ್ತು ಶ್ರೀ ಅಣ್ಣಪ್ಪ ಸ್ವಾಮಿ ಹಿತರಕ್ಷಣಾ ಸಮಿತಿ ಮತ್ತು ಭಕ್ತದಾಧಿಗಳ ವೃಂದ ಕೊಡ್ಲಿಪೇಟೆ ಇವರ ವತಿಯಿಂದ ಪಟ್ಟಣದಲ್ಲಿ ಅಪಪ್ರಚಾರ ಮಾಡುತ್ತಿರುವ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜನಾಗ್ರಹ ಜಾಥಾ ಹಮ್ಮಿಕೊಳ್ಳಲಾಯಿತು.
