ಸಂಬಂಧಿಕರ ತಿಥಿ ಕಾರ್ಯ ಮುಗಿಸಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿ ಬಿದ್ದು ಸಾವಿಗೀಡಾದ ಘಟನೆ ಗುಡ್ಡೆಹೊಸೂರುವಿನ ಹಾರಂಗಿ ರಸ್ತೆಯಲ್ಲಿ ನಡೆದಿದೆ.

ಮೂಲತಃ ಸೋಮವಾರಪೇಟೆಯ ಸೂರ್ಲಬ್ಬಿ ನಿವಾಸಿಯಾಗಿರುವ ಓಡಿಯಂಡ ಮಾಚಯ್ಯ (60) ಮೃತ ದುರ್ದೈವಿ. ಮಳೆಯ ಹಿನ್ನಲೆ ಕಾರ್ಯಕ್ರಮ ಮುಗಿಸಿ ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದ್ದು, ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯ ಮೃತಪಟ್ಟಿದ್ದು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.