ಮಡಿಕೇರಿ: ತಾಲ್ಲೂಕಿನ ನಾಪೋಕ್ಲುವಿನ ಕೋಟೆರಿ ಗ್ರಾಮದಲ್ಲಿ ರಸ್ತೆ ಬದಿಗೆ ಮಗುಚಿ ಬಿದ್ದ ಘಟನೆ ನಡೆದಿದೆ. ಕಕ್ಕಬೆಯಿಂದ ನಾಪೋಕ್ಲು ಮಾರ್ಗವಾಗಿ ಮಡಿಕೇರಿ ಕಡೆಗೆ ವೇಗವಾಗಿ ತೆರಳುತ್ತಿದ್ದ ಸಂದರ್ಭ ರಸ್ತೆ ಬದಿಯಲ್ಲಿ ತಡೆಗೋಡೆ ಇಲ್ಲದ ಹಳಕ್ಕೆ ಮಗುಚಿದ್ದು ಬಸ್ಸಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡು ನಾಪೋಕ್ಲು ಮತ್ತು ಮಡಿಕೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಘಟನೆಯಲ್ಲಿ ಮನೆಯೊಂದಕ್ಕೆ ಹಾನಿ ಉಂಟಾಗಿದೆ.