ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಎಸ್.ಡಿ.ಪಿ.ಐ ಪಕ್ಷದ ಅಭ್ಯಾರ್ಥಿ ವಕೀಲ,ಮಡಿಕೇರಿ ನಗರಸಭಾ ಸದಸ್ಯ ಅಮೀನ್ ಮೋಹಿಸ್ಸಿನ್ ರನ್ನು ಪಕ್ಷದ ಕಾರ್ಯಕರ್ತರು ಕೊಡಗಿನ ಹೆಬ್ಬಾಗಿಲು ಕುಶಾಲನಗರದ ಕೊಪ್ಪ ಗೇಟ್ ಬಳಿ ಅದ್ದೂರಿಯಾಗಿ ಸ್ವಾಗತ ಕೋರಲಾಯಿತು.

ಬೆಂಗಳೂರಿನಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅಧಿಕೃತವಾಗಿ ಅಮೀನ್ ಮೊಹಿಸ್ಸಿನ್ ಅವರ ಹೆಸರು ಘೋಷಣೆ ಮಾಡಿದ್ದು, ಕೊಡಗು ಜಿಲ್ಲೆಗೆ ಪ್ರವೇಶಿಸುತ್ತಿರುವಂತೆ ಘೋಷಣೆಗಳೊಂದಿಗೆ ಕಾರ್ಯಕರ್ತರು ಸ್ವಾಗತಿಸಿದರು.