ಚನ್ನಗಿರಿ ಶಾಸಕರ ಭ್ರಷ್ಟಾಚಾರವನ್ನು ವಿರೋಧಿಸಿ, ಮುಖ್ಯಮಂತ್ರಿ ನೈತಿಕಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸುವಂತೆ ಆಗ್ರಹಿಸಿ, ಕೊಡಗು ಜಿಲ್ಲಾ ಕಾಂಗ್ರೆಸ್ ನಿಂದ ಸಾಂಕೇತಿಕ ಕೊಡಗು ಬಂದ್ ಗೆ ಕರೆ
ಬಿಜೆಪಿ ಸರಕಾರದ ಭ್ರಷ್ಟಾಚಾರವನ್ನು ವಿರೋಧಿಸಿ ರಾಜ್ಯಾದ್ಯಂತ ಸಾಂಕೇತಿಕ ಬಂದ್ಗೆ ಕೆಪಿಸಿಸಿ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಮಾ. 9ರ ಗುರುವಾರ ಬೆಳಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಸಾಂಕೇತಿಕವಾಗಿ ಕೊಡಗು ಬಂದ್ ಗೆ ಕರೆ ನೀಡಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ.

ಶಾಲೆ, ಕಾಲೇಜು, ವೈದ್ಯಕೀಯ ಸೇವೆ ಸೇರಿದಂತೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಸ್ವಯಂಪ್ರೇರಿತ ಬಂದ್ಗೆ ಕರೆನೀಡಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಧರ್ಮಜ ಉತ್ತಪ್ಪ ಮನವಿ ಮಾಡಿದರು.

ಮಾ. 12 ಮತ್ತು 13ರಂದು ಜಿಲ್ಲೆಯ ಆರು ಸ್ಥಳಗಳಲ್ಲಿ ಪ್ರಜಾಧ್ವನಿ ಯಾತ್ರೆ ನಡೆಯಲಿದೆ ಎಂದು ಧರ್ಮಜ ಉತ್ತಪ್ಪ ತಿಳಿಸಿದರು.