ಡಾ.ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದಿಂದ ನೀಡಲಾಗುವ ಸವತುಗಳಿಗೆ ಅರ್ಹ ಫಲಾನುಭವಿಗಳನ್ನು ಗುರುತಿಸಿದ್ದು, ನಿಗಮದಿಂದ ವತಿಯಿಂದ ಕೌಶಲ್ಯ ಅಭಿವೃದ್ದಿ ಮತ್ತು ಆದಾಯ ಗಳಿಕೆ ತರಬೇತಿ ಯೋಜನೆ ಅಡಿಯಲ್ಲಿ ಚರ್ಮ ಕೈಗಾರಿಕೆಗೆ ಸಂಬಂಧಿಸಿದಂತೆ ಪೊನ್ನಂಪೇಟೆಯ ಶಿವ ಕಾಲೋನಿಯ 30 ಫಲಾನುಭವಿಗಳಿಗೆ ಪ್ರಮಾಣಪತ್ರ,6 ಸಾವಿರ ವಿದ್ಯಾರ್ಥಿ ವೇತನ ಮತ್ತು ಹೊಲಿಗೆ ಯಂತ್ರವನ್ನು ಶಾಸಕ ಕೆ.ಜಿ ಬೋಪಯ್ಯ ವಿತರಿಸಿದರು.