ಕೊಡಗಿನ ಆರಾಧ್ಯ ದೈವ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಜರುಗಲಿರುವ ಕುಂಬ್ಯಾರು ಕಲಾಡ್ಚ ಉತ್ಸವ ವಿಜೃಂಭಣೆಯಿಂದ ಜರುಗಿತು.

ದೇವತಕ್ಕರಾದ ಪರದಂಡ ಕುಟುಂಬಸ್ಥರ ಐನ್ ಮನೆಯಿಂದ ಆಗಮಿಸಿದ ಎತ್ತು ಪೋರಾಟ ಮತ್ತು ಬಲಿವಾಡು ಆಗಮನದಿಂದ ಉತ್ಸವಕ್ಕೆ ಚಾಲನೆ ದೊರೆಯಿತು.ಜೂತೆಗೆ ಇತರೆ ಎತ್ತುಪೋರಾಟ ದೇವರ ಸೇವೆಗಳು ಇದೇ ಸಂದರ್ಭದಲ್ಲಿ ನಡೆಯಿತು. ಉತ್ಸವಕ್ಕೆ ಆಗಮಿಸಿದ್ದ ಭಕ್ತರಿಗೆ ಅನ್ನ ಪ್ರಸಾದ ವಿತರಿಸಲಾಯಿತು.ಬಳಿಕ ಆದಿ ಸ್ಥಳ ಮಲ್ಮ ಬೆಟ್ಟಕ್ಕೆ ತೆರಳಿ ಉತ್ಸವಕ್ಕೆ ತೆರೆ ಎಳೆಯಲಾಯಿತು.