ಸೋಮವಾರಪೇಟೆಯಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದ ಹೊನಲು ಬೆಳಕಿನ ಲೀಗ್ ಹಂತದ ಕಬಡಿ ಪಂದ್ಯಾವಳಿ ಅಂತ್ಯ ಕಂಡಿದೆ.ಒಕ್ಕಲಿಗರ ಸಂಘದ ವತಿಯಿಂದ ಏರ್ಪಡಿಸಿದ್ದ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರರು ಸೇರಿ ಒಟ್ಟು ಏಳು ತಂಡಗಳು ಸ್ಪರ್ಧಿಸಿದ್ದವು.
ಸಮಾರೋಪ ಸಮಾರಂಭದಲ್ಲಿ ಶಾಸಕ ಅಪ್ಪಚ್ಚು ರಂಜನ್,ಮಾಜಿ ಸಚಿವ ಜೀವಿಜಯ ಸೇರಿದಂತೆ ವಿವಿಧ ರಾಜಕೀಯ ಪಕ್ಷದ ಪ್ರಮುಖರು ಹಾಜರಿದ್ದರು.