ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಕುಶಾಲನಗರದಲ್ಲಿ ನಡೆಸಲಾಯಿತು.ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿಯ ವತಿಯಿಂದ ಏರ್ಪಡಿಸಿದ್ದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆ ನಡೆಸಿ ಮಾತನಾಡಿದ ರೂಪಾ ಸತೀಶ್ ಬಿಡುವಿನ ಸಂದರ್ಭ ದಲ್ಲಿ ಸಮಾಜದತ್ತ ಯೋಚಿಸಬೇಕು ಎಂದರು.
ವೇದಿಕೆಯಲ್ಲಿ ಕೂಡಿಗೆ ಕ್ರೀಡಾಶಾಲೆಯ ಮಾಜಿ ಪ್ರಾಂಶುಪಾಲ ಕುಂತಿ ಬೋಪಯ್ಯ, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷೆ ಸವಿತಾ ರೈ, ಕಾರ್ಯಕ್ರಮ ಸಂಚಾಲಕಿ ವನಿತಾ ಚಂದ್ರಮೋಹನ್ ಹಾಜರಿದ್ದರು