ಸಮಾಜದ ಸುಧಾರಣೆಗೆ ವಿವಿಧ ಯೋಜನೆಗಳ ಮೂಲಕ ಶ್ರಮಿಸುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮೀಣಾಭಿವೃದ್ಧಿಯ ಯೋಜನೆಯು,ಮಹಿಳೆಯರ ಆರ್ಥಿಕ ಸ್ವಾಲಂಭನೆಗೆ ಪೂರಕವಾದ ಕೆಲಸ ಮಾಡುತ್ತಿದೆ ಎಂದು ಶಾಸಕ ಅಪ್ಪಚ್ಚು ರಂಜನ್ ಅಭಿಪ್ರಾಯ ಪಟ್ಟರು.
ಸಮಿತಿ ವತಿಯಿಂದ ಸೋಮವಾರಪೇಟೆಯಲ್ಲಿ ಆಯೋಜಿಸಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು ಸರ್ಕಾರದ ಸವಲತ್ತುಗಳನ್ನು ಮಹಿಳೆಯರು ಸದುಪಯೋಗ ಪಡೆದುಕೊಂಡು ಸ್ವಾವಲಂಬಿ ಯಾಗಬೇಕು ಎಂದರು.