ಮಡಿಕೇರಿ ಲೋಕಾಯುಕ್ತ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ ನಡೆದಿದೆ. ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿ ಲೋಕಾಯುಕ್ತದ ಬಲೆಗೆ
ಸಿಲುಕಿದ್ದಾರೆ.

ಉಪ ಅರಣ್ಯ ಸಂರಕ್ಷಣಾಧಿಕಾರಿ ಕು. ಪೂರ್ಣಿಮಾ ಅಧಿಕಾರಿಗಳ ಬಲೆಗೆ ಬಿದ್ದ ಅಧಿಕಾರಿಯಾಗಿದ್ದು,
50 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತರ ಸಿಕ್ಕಿ ಹಾಕಿ ಕೊಂಡಿದ್ದಾರೆ.

ತನ್ನ ಸಹೋದ್ಯೋಗಿಗಳಿಂದ ಲಂಚ ಪಡೆಯುತ್ತಿದ್ದಾಗ ಸಿಕ್ಕಿ ಬಿದ್ದಿದ್ದಾರೆ. ವಲಯ ಅರಣ್ಯಾಧಿಕಾರಿಗಳಾದ
ಮಯೂರ, ಉದಯ ಹಾಗು ಕಾರವೇಕರ ಎಂಬುವರಿಂದ ಹಣ ಪಡೆಯುತ್ತಿದ್ದ ಅಧಿಕಾರಿ ಸಿಕ್ಕಿ ಹಾಕಿಕೊಂಡಿದ್ದಾರೆ.
ಲೋಕಾಯುಕ್ತ ಡಿಎಸ್ಪಿ ಪವನ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದೆ. ಲೋಕಾಯುಕ್ತರು ಇದೀಗ ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.