ಮಡಿಕೇರಿ ಮಾ.09:-ನಗರದ ಶ್ರೀ ಓಂಕಾರೇಶ್ವರ ದೇವಾಲಯವು ಧಾರ್ಮಿಕ ದತ್ತಿ ಇಲಾಖೆಯ ಪ್ರವರ್ಗ ‘ಎ’ ಅಧಿಸೂಚಿತ ಸಂಸ್ಥೆಯಾಗಿದ್ದು, ಈ ದೇವಾಲಯಕ್ಕೆ 9 ಜನ ಸದಸ್ಯರಿರುವ ವ್ಯವಸ್ಥಾಪನಾ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಬೇಕಾಗಿದ್ದು, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ಅಧಿನಿಯಮ 2011 ರ ಕಲಂ 25 ರನ್ವಯ ಆಸಕ್ತ ಭಕ್ತಾಧಿಗಳು/ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ದೇವಾಲಯದ ಕೌಂಟರ್‍ನಲ್ಲಿ ಪಡೆದುಕೊಳ್ಳಬಹುದು ಹಾಗೂ ಅರ್ಜಿಯನ್ನು ಮಾರ್ಚ್, 17 ರೊಳಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ.9902290302, 9845821566 ನ್ನು ಸಂಪರ್ಕಿಸಬಹುದು ಎಂದು ಶ್ರೀ ಓಂಕಾರೇಶ್ವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ದೇವರಾಜು ಅವರು ತಿಳಿಸಿದ್ದಾರೆ.