ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾಂಗ್ರೆಸ್ ಗ್ಯಾರಂಟಿ ಬಾಂಡ್ ವಿತರಣೆ ಕಾರ್ಯಕ್ರಮ ಮಡಿಕೇರಿ ನಗರದಲ್ಲಿ ಬಿರುಸಿನಿಂದ ನಡೆಯುತ್ತಿದೆ.ಕುಟುಂಬದ ಪ್ರತಿ ಮಹಿಳೆಯರಿಗೆ ಮಾಸಿಕ ಎರಡು ಸಾವಿರ ರೂಗಳು ,ಉಚಿತ 200 ಯೂನಿಟ್ ಕರೆಂಟ್ ಎಂಬ ಗ್ಯಾರೆಂಟಿ ಬಾಂಡ್ ಗೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಸಹಿ ಮಾಡಿದ್ದು ಈ ಬಾಂಡನ್ನು ಕಾಂಗ್ರೆಸ್ ಕಾರ್ಯಕರ್ತರು ನಗರದ ಪ್ರತಿ ಮನೆಮನೆಗೆ ತೆರಳಿ ನೀಡಿ ವಿವರಿಸುತ್ತಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಕಾಂಕ್ಷಿಯಾಗಿರುವ ಹೈಕೋರ್ಟ್ ಹಿರಿಯ ವಕೀಲ ಹೆಚ್.ಎಸ್.ಚಂದ್ರಮೌಳಿ ಯವರು ಬಾಂಡ್ ವಿತರಣೆ ಕಾರ್ಯದಲ್ಲಿ ಭಾಗಿಯಾಗಿ ಕಾರ್ಯಕರ್ತರ ಉತ್ಸಾಹ ಹೆಚ್ಚಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಚಂದ್ರಮೌಳಿಯವರು ಇದೊಂದು ಅದ್ಬುತ ವಾದ ಕಾರ್ಯಕ್ರಮವಾಗಿದ್ದು ಮನೆಯ ಗೃಹಿಣಿ ಯಾವುದಕ್ಕೂ ಅವಲಂಬಿತವಾಗಿರಬಾರದು ಮತ್ತು ಸ್ವಾವಲಂಬಿಯಾಗಿ ಮನೆಯನ್ನು ನಡೆಸಬೇಕು ಎಂಬ ಉದ್ದೇಶದಿಂದ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಗಳನ್ನು ಮನೆಮನೆಗೆ ತಲುಪಿಸುತ್ತಿದ್ದು ಇದು ಜನರ ಮೇಲೆ ಪರಿಣಾಮ ಬೀರಲಿದ್ದು ಯಶಸ್ವಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ ಮಾತನಾಡಿ ಕಾಂಗ್ರೆಸ್ ಗ್ಯಾರಂಟಿ ಬಾಂಡ್ ಅನ್ನುವುದು ಅತ್ಯಂತ ವಿನೂತನ ಕಾರ್ಯಕ್ರಮವಾಗಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರ ಮತ್ತು ಸಾರ್ವಜನಿಕರ ನಡುವೆ ಇರುವ ಅಂತರವನ್ನು ತೊಡೆದು ಹಾಕುವ ಪ್ರಯತ್ನ ವಾಗಿದೆ.ಕಳೆದ ನಾಲ್ಕು ದಿನಗಳಿಂದ ಮಡಿಕೇರಿ ನಗರದ ಎಲ್ಲಾ ಮನೆಗಳಿಗೆ ತಲುಪಿಸಲಾಗುತ್ತಿದ್ದು ಪ್ರತಿ ಮನೆಯಲ್ಲೂ ಮಹಿಳೆಯರು ಬಾಂಡ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.ಈ ನಿಟ್ಟಿನಲ್ಲಿ ಸಾರ್ವಜನಿಕರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ಕೋರಿದರು.
ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಎ.ಹಂಸ ,ಮಾಜಿ ನಗರ ಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ,ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಾರ್ ,ಮಾಜಿ ಮೂಡಾ ಅಧ್ಯಕ್ಷ ಚುಮ್ಮಿ ದೇವಯ್ಯ,ಪ್ರಮುಖರಾದ ಅಬ್ದುಲ್ ರಜಾಕ್, ಮಂಡಿರ ಸದಾ ಮುದ್ದಪ್ಪ,ಪ್ರಕಾಶ್ ಆಚಾರ್ಯ, ಕಾನೆಹಿತ್ಲು ಮೊಣ್ಣಪ್ಪ,ಯಶ್ ದೋಲ್ಪಾಡಿ, ಟಿ.ಎಂ.ಅಯ್ಯಪ್ಪ,ಮುದ್ದುರಾಜ್,ಮುಂಡಂಡ ಸುದಯ್ ನಾಣಯ್ಯ,ರವೂಫ್ ಶೇಖ್,ಸ್ವರ್ಣಲತಾ,ಖಲೀಲ್ ಬಾಷ,ಹಫೀಸ್ ಬಾಯ್,ಫ್ಯಾನ್ಸಿ ಪಾರ್ವತಿ,ಮೀನಾಜ್ ಪ್ರವೀಣ್,ಪ್ರೇಮಾ ನಿಂಗಪ್ಪ,ಪ್ರೇಮಾ ಕೃಷ್ಣಪ್ಪ,ಹನೀಫ್ ಸೇರಿದಂತೆ ಮುಖಂಡರು,ಬೂತ್ ಪ್ರಮುಖರು ಭಾಗವಹಿಸಿದ್ದರು.