ಭಾರತೀಯ ಜನತಾ ಪಾರ್ಟಿ ಕೊಡಗು ಜಿಲ್ಲಾ ಯುವ ಮೋರ್ಚಾ ಆಶ್ರಯದಲ್ಲಿ ಸೋಮವಾರಪೇಟೆ ಒಕ್ಕಲಿಗ ಕಲ್ಯಾಣ ಮಂಟಪದಲ್ಲಿ ಯುವ ಶಕ್ತಿ ಸಂಗಮ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಯುವ ಮೋರ್ಚಾದ ರಾಜ್ಯಾಧ್ಯಕ್ಷ ಡಾ.ಸಂದೀಪ್ ಕುಮಾರ್ ಉದ್ಘಾಟಿಸಿದರು.
ಶಾಸಕರಾದ ಅಪ್ಪಚ್ಚು ರಂಜನ್,ಕೆ.ಜಿ ಬೋಪಯ್ಯ, ಎಂ.ಎಲ್ಸಿ ಸುಜಾಕುಶಾಲಪ್ಪ, ಕೊಡಗು ಜಿಲ್ಲಾ ಯುವ ಮೋರ್ಚಾದ ಅಧ್ಯಕ್ಷ ದರ್ಶನ್ ಜೋಯಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರಿ ಬಿ.ಬಿ ಭಾರತೀಶ್, ಮಾಜಿ ಎಂ.ಎಲ್ಸಿ ಎಸ್.ಜಿ ಮೇದಪ್ಪ, ಸೋಮವಾರಪೇಟೆ ಮಂಡಲ ಅಧ್ಯಕ್ಷ ಮನುಕುಮಾರ್ ರೈ ಸೇರಿದಂತೆ ಪ್ರಮುಖರು ಹಾಜರಿದ್ದರು.