ಕರಾವಳಿ ಸೇರಿ ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಸಾಧಾರಣ ಮಳೆ ಆಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಹೇಳಿದ ಬೆನ್ನಲ್ಲೇ ಮಧ್ಯಾಹ್ನ ಸರಿಸುಮಾರು 2 ಗಂಟೆಯಿಂದ ಕುಶಾಲನಗರ ಮತ್ತು ಸೋಮವಾರಪೇಟೆ ವ್ಯಾಪ್ತಿಯಲ್ಲಿ ಗುಡುಗು ಸಹಿತ ಎಡಬಿಡದೆ ಮಳೆಯಾಗಿದೆ.ಏಕಾಏಕಿ ಮಳೆ ಸುರಿದ ಪರಿಣಾಮ ಜನಜೀವನ ಒಂದೆಡೆ ಅಸ್ಥವ್ಯವಾದರೆ, ಬಿಸಿಲಿನ ತಾಪಕ್ಕೆ ತತ್ತರಿಸಿದ್ದ ಈ ಪ್ರದೇಶದಲ್ಲಿ ಒಂದಷ್ಟು ತಂಪಿನ ವಾತಾವರಣ ಅನುಭವಿಸಿದರು.

ಮಾ.14 ರಿಂದ 18ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವೆಡೆ ಮಳೆ ಬರಲಿದ್ದು, ಮಾ.16 ರಿಂದ 18ರವರೆಗೆ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆ ಆಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬಳ್ಳಾರಿ, ಬೀದರ್, ಧಾರವಾಡ, ಗದಗ, ಕಲಬುರಗಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಯ ಕೆಲವು ಕಡೆ ಮಾ.16 ರಿಂದ ಮಾ.18ರವರೆಗೆ ಮಳೆ ಆಗಲಿದೆ.

ಸಮುದ್ರ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಕಾರಣ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ.