ಸೋಮವಾರಪೇಟೆ ಪಟ್ಟಣದ ಶ್ರೀಮುತ್ತಪ್ಪ ಸ್ವಾಮಿ ಹಾಗೂ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವವು ಧಾರ್ಮಿಕ ವಿಧಿ ವಿಧಾನಗಳ ಮೂಲಕ ವಿದ್ಯುಕ್ತ ಚಾಲನೆ ದೊರೆಯಿತು.

ದೇವಾಲಯದ ಪ್ರಧಾನ ಅರ್ಚಕ ಮಣಿಕಂಠನ್ ನಂಬೂದರಿ ಅವರ ನೇತೃತ್ವದಲ್ಲಿ ಗಣಪತಿಹೋಮ ದೊಂದಿಗೆ ಪೂಜಾ ಕೈಂಕರ್ಯ ಆರಂಭಗೊಂಡವು.
ಇದೇ ಸಂದರ್ಭ ಶಾಸಕರ ಅನುಧಾನದಲ್ಲಿ ನಿರ್ಮಾಣವಾಗಿರುವ ಅನ್ನದಾನ ಮಂಟಪವನ್ನು ಶಾಸಕ ಅಪ್ಪಚ್ಚು ರಂಜನ್ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.