ಪೊನ್ನಂಪೇಟೆ ಕೊಡವ ಸಮಾಜದಲ್ಲಿ ಗೋಣಿಕೊಪ್ಪ ಕಾವೇರಿ ಪೊಮ್ಮಕ್ಕಡ ಕೂಟದ ವತಿಯಿಂದ “ಮಿನ್ಯಾರ್ ನಮ್ಮೆ 2023” ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಎಂಎಲ್ಸಿ ಸುಜಾಕುಶಾಲಪ್ಪ ಬಳಿಕ ಮಾತನನಾಡಿ ಕೊಡವರ ಆಚಾರ ವಿಚಾರ, ಪದ್ದತಿ ಪರಂಪರೆ ಉಳಿಸುವ ನಿಟ್ಟಿನಲ್ಲಿ ಮಹಿಳೆಯರ ಪಾತ್ರ ಮುಖ್ಯವಾಗಿ ಪಾತ್ರವಾಗಿದೆ,ಕೊಡವರ ಪದ್ದತಿ ಹೆಚ್ಚಾಗಿ ಪರಿಚಯಿಸುವ ಮೂಲಕ ನಮ್ಮ ಸಂಸ್ಕೃತಿ ಉಳಿಸುವ ಕಾರ್ಯ ಮನೆಯಿಂದಲೇ ಆರಂಭವಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಕೊಡವ ಮಹಿಳಾ ಸಾಧಕರಿಗೆ ಸನ್ಮಾನಿಸಲಾಯಿತು,ವಿವಿಧ ತಿಂಡಿಗಳ ತೀನೀಮೇಳ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ವಿಶೇಷ ಅತಿಥಿಯಾಗಿ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ,ಹೈಕೋರ್ಟ್ ಹಿರಿಯ ವಕೀಲ ಎ.ಎಸ್ ಪೊನ್ನಣ್ಣ,ಮಾಜಿ ಎಂಎಲ್ಸಿ ವೀಣಾ ಅಚ್ಚಯ್ಯ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.