ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ಮಹಾನ್ ವ್ಯಕ್ತಿಗಳ ಜೀವನ ಚರಿತ್ರೆ ಎಲ್ಲರೂ ಅರಿತು ಕೊಳ್ಳಬೇಕು ಮತ್ತು ಅದನ್ನು ಆದರ್ಶವಾಗಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದ ಅವರು 1824 ರಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಅವರು ಬ್ರಿಟಿಷರ ವಿರುದ್ದ ಹೋರಾಟ ನಡೆಸಿ ಈಗ 200 ವರ್ಷ ಪೂರೈಸಿದೆ.ಚೆನ್ನಮ್ಮ ಜೊತೆ ಸಂಗೊಳ್ಳಿರಾಯಣ್ಣ ಸಹ ಹೋರಾಡಿದ್ದರು. ನಂತರ ಝಾನ್ಸಿ ರಾಣಿ ಲಕ್ಷ್ಮಿಬಾಯಿ ಹೋರಾಡಿದ್ದರು. ಪ್ರತಿ ದಿನ ಪ್ರತಿ ಕ್ಷಣ ಅವರ ನೆನಪು ಇರಬೇಕು. ನೆನಪುಗಳು ಅಲ್ಲದೆ ಅವರ ಜೀವನ ಸಂದೇಶವನ್ನು ಪಾಲಿಸಬೇಕು. ಅವರ ಕನಸು ನನಸಾಗುತ್ತದೆ ಎಂದು ಹೇಳಿದರು.