ಕೋಟ ಶ್ರೀನಿವಾಸ ಪೂಜಾರಿ ಲೋಕಸಭೆಗೆ ಆಯ್ಕೆ ಯಾದ ಬಳಿಕ ತೆರವಾಗಿದ್ದ ದಕ್ಷಿಣ ಕನ್ನಡ ಪ್ರಾಧಿಕಾರ ಕ್ಷೇತ್ರದಲ್ಲಿ ನಡೆದ ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಬೋಟ್ಯಾಡಿ ಕಾಂಗ್ರೆಸ್ ವಿರುದ್ದ ಗೆಲುವಿನ ನಗೆ ಬೀರಿದ್ದಾರೆ.

ಉಡುಪಿ ಮತ್ತು ದಕ್ಷಿಣಕನ್ನಡ ಜಿಲ್ಲೆಯ 5092 ಮತಗಳ ಪೈಕಿ ಬಿಜೆಪಿ 3654,ಕಾಂಗ್ರೆಸ್ 1957 ಮತ್ತು ಏಸ್ ಡಿ ಪಿ ಐ 195 ಮತಗಳನ್ನು ಪಡೆದುಕೊಂಡಿದೆ. ಆರಂಭದಲ್ಲೇ 1600 ಮತಗಳಿಂದ ಮುನ್ನಡೆ ಕಾಯ್ದುಕೊಂಡ ಬಿಜೆಪಿ ಅಂತಿಮವಾಗಿ ಗೆಲುವು ಸಾಧಿಸಿದ್ದು ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.