ಕುಶಾಲನಗರ ಪಟ್ಟಣದಲ್ಲಿ ನಡೆಯಲಿರುವ ಹನುಮ ಜಯಂತಿ ಕುರಿತು ಸ್ಥಳೀಯ ಶಾಸಕ ಡಾ. ಮಂತರ್ ಗೌಡ ಅವರ ಸಮ್ಮುಖದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಈ ಭಾರಿಯು ಹನುಮ ಜಯಂತಿ ಅದ್ದೂರಿಯಾಗಿ ನಡೆಸಲಾಗುವುದು, ಎಂದಿನಂತೆ 10 ಮಂಟಪಗಳ ಮೆರವಣಿಗೆ ನಡೆಸಲಾಗುವುದು ಎಂದು ಶಾಸಕರಿಗೆ ಜಯಂತಿ ಸಮಿತಿ ಮಾಹಿತಿ ನೀಡಲಾಯಿತು. ಇನ್ನು ಹನುಮ ಜಯಂತಿ ಆಚರಣೆಗೆ ಸರ್ಕಾರದಿಂದ ಅನುದಾನದ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿವಿಧ ದೇವಾಲಯಗಳ ಒಕ್ಕೂಟ ಅಧ್ಯಕ್ಷ ದಿನೇಶ್ ಮತ್ತು ಹನುಮ ಜಯಂತಿ ಆಚರಣೆ ಅಧ್ಯಕ್ಷ ಕೃಷ್ಣಪ್ಪ ಸೇರಿದಂತೆ ಸಮಿತಿ ಸದಸ್ಯರು ಹಾಜರಿದ್ಧರು.