ಇತ್ತೀಚೆಗೆ ಅಪಘಾತದಲ್ಲಿ ತೀವ್ರ ಗಾಯಗೊಂಡು ತಮ್ಮ ಬಲಗಾಲನ್ನು ಕಳೆದುಕೊಂಡಿದ್ದ ಶ್ಯಾಮ್ ಕೊಯಿನಾಡು ರವರ ಮನೆಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಹಾಗು ಕೊಡಗು ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ರವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಶಾಮ್ ರವರು, ಸಂಪಾಜೆ ಗ್ರಾಮ ಪಂಚಾಯಿತಿನ ಮಾಜಿ ಸದಸ್ಯೆ, ಪ್ರಸ್ತುತ ಮಡಿಕೇರಿ ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯೆಯಾಗಿರುವ ರಾಜೇಶ್ವರಿ ರವರ ಪತಿಯಾಗಿದ್ದು ಕುಟುಂಬಕ್ಕೆ ಆಸರೆಯಾಗಿದ್ದ ಶಾಮ್ ನವರಿಗೆ ಮುಂದಿನ ದಿನಗಳಲ್ಲಿ ಸೂಕ್ತ ವ್ಯವಸ್ಥೆ ಮಾಡಿಕೊಳ್ಳುವುದರ ಬಗ್ಗೆ ಭರವಸೆ ನೀಡಿದರು.