ಕೊಡಗು ಜಿಲ್ಲೆಯ ಜಿಲ್ಲಾ ಕೇಂದ್ರ ಮಡಿಕೇರಿಯ ಕೋಟೆ ಆವರಣದಲ್ಲಿ ಜಿಲ್ಲಾಡಳಿತದಿಂದ ಕನ್ನಡ ರಾಜ್ಯೋತ್ಸವ ಸಂಭ್ರಮ ಸಡಗರದಿಂದ ಆಚರಿಸಲಾಯಿತು.ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್ ಎಸ್ ಬೋಸರಾಜ್ ರಾಷ್ರಧ್ವಜರೋಹಣ ನೆರವೇರಿಸಿ ಧ್ವಜ ವಂದನೆ ಸ್ವೀಕರಿಸಿದರು.
ಪಥಸಂಚಲನ ಸಿದ್ಧತೆ ವೀಕ್ಷಿಸಿದ ಬಳಿಕಜಿಲ್ಲಾ ಸಶಸ್ತ್ರ ಮೀಸಲು ಪಡೆ, ಪೊಲೀಸ್ಅಗ್ನಿಶಾಮಕ ಸಿಬ್ಬಂದಿ, ಎನ್ ಸಿಸಿ ಸ್ಕೌಟ್ಸ್ ಅಂಡ್ ಗೌಡ್ಸ್ ವಿದ್ಯಾರ್ಥಿಗಳಿಂದ ಪಥಸಂಚಲನ ನೆರವೇರಿತು. ವಿವಿಧ ಶಾಲಾ ಮಕ್ಕಳಿಂದ ದೇಶಭಕ್ತಿ ಗೀತೆಗಳಿಗೆ ಆಕರ್ಷಕ ಕಾರ್ಯಕ್ರಮ ನೆರವೇರಿದವು.