ಕೊಡಗು ಜಿಲ್ಲಾ ವಿಶ್ವ ಹಿಂದೂ ಪರಿಷತ್ ವತಿಯಿಂದ ನವೆಂಬರ್ 15ರಂದು ಸಂಜೆ 5:00 ಗಂಟೆಗೆ ಭಾಗಮಂಡಲದ ಕಾವೇರಿ ಕನ್ನಿಕೆ ಹಾಗೂ ಸುಜೋತಿ ನದಿಗಳ ತ್ರಿವೇಣಿ ಸಂಗಮದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಭಜನೆ, ವೇದಘೋಷದೊಂದಿಗೆ ಕಾವೇರಮ್ಮನಿಗೆ ಆರತಿ ಬೆಳಗಲಾಗುವುದು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಜೇಷ್ಠ ಪ್ರಚಾರಕರಾದ ಶ್ರೀ ಸು. ರಾಮಣ್ಣ , ಪಾಲ್ಗೊಳ್ಳಲಿದ್ದು ವಿಶ್ವ ಹಿಂದೂ ಪರಿಷತ್ನ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿಗಳಾದ ಶ್ರೀ ಶರಣ್ ಪಂಪ್ ವೆಲ್, ಭಾಗವಹಿಸಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಪ್ರಕಟಣೆಯಲ್ಲಿ ತಿಳಿಸಿದೆ.