ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ ಹಾಗೂ ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವವು ನವೆಂಬರ್, 30 ರಂದು ಬೆಳಗ್ಗೆ 9 ಗಂಟೆಗೆ ನಗರದ ಎಫ್‍ಎಂಕೆಎಂಸಿ ಕಾಲೇಜಿನಲ್ಲಿ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಚಿಕ್ಕಳುವಾರ ಕೊಡಗು ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ.ಅಶೋಕ್ ಸಂಗಪ್ಪ ಆಲೂರು ಇತರರು ಪಾಲ್ಗೊಳ್ಳಲಿದ್ದಾರೆ.
ನಂತರ ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೆ| ಡಾ.ಬಿ.ರಾಘವ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಇತರರು ಪಾಲ್ಗೊಳ್ಳಲಿದ್ದಾರೆ.