ಫೆಂಗಲ್ ಚಂಡಮಾರುತ ಪರಿಣಾಮದಿಂದ ತಮಿಳುನಾಡು, ಪುದುಚೆರಿಯಲ್ಲಿ ಭಾರಿ ಮಳೆಯಾಗುತ್ತಿದ್ದು ಕರ್ನಾಟಕದ ಮೇಲೂ ಪರಿಣಾಮ ಬೀರಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಬಹುತೇಕ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ತುಮಕೂರು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದೆ.ಕೊಡಗು ಜಿಲ್ಲೆಯಲ್ಲೂ ಭಾನುವಾರ ಸಂಜೆ ಮಳೆಯಾಗಿದ್ದು, ಸೋಮವಾರ ಸಂಜೆವರೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.