ಬಿರುನಾಣಿ ಸಮೀಪ ಪರಕಟಗೇರಿಯಲ್ಲಿ ಬಸ್ ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿದ ಕರ್ತಮಾಡ ಶಾರದಾ (75)ಅವರನ್ನು
ರಾಜ್ಯ ವನ್ಯಜೀವಿ ಸಂರಕ್ಷಣಾ ಮಂಡಳಿ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಅವರು ಜಿಲ್ಲಾಸ್ಪತ್ರೆಗೆ ಭೇಟಿ ಮಾಡಿದರು.
ಗಾಯಗೊಂಡ ಮಹಿಳೆಯ ಅರೋಗ್ಯ ವಿಚಾರಿಸಿದ್ದು ಕಾಲು ಹಾಗೂ ಪಕ್ಕೆಲುಬು ಸ್ಕ್ಯಾನಿಂಗ್ ವರದಿ ಬಂದ ನಂತರ ವೈದ್ಯರ ನಿರ್ಧಾರದಂತೆ ಜಿಲ್ಲಾಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡುವ ಅಥವಾ ಹೆಚ್ಚಿನ ಚಿಕಿತ್ಸೆ ಅಗತ್ಯವಾದರೆ ಬೇರೆ ಆಸ್ಪತ್ರೆಗೆ ದಾಖಲಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.
ಹೆಚ್ಚಿನ ಚಿಕಿತ್ಸೆ ಅಗತ್ಯವಾದರೆ ಅರಣ್ಯ ಇಲಾಖೆ ವತಿಯಿಂದ ಮೈಸೂರು ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ವೆಚ್ಚ ಭರಿಸಲಾಗುವುದು ನೀಡಲಾಗುವುದು ಎಂದು ಅವರು ತಿಳಿಸಿದರು.
ಪರಕಟಗೇರಿಯಲ್ಲಿ ಕಾಣಿಸಿಕೊಂಡಿರುವ ಕಾಡಾನೆಯನ್ನು ಅರಣ್ಯಕ್ಕೆ ಅಟ್ಟಲು ಶನಿವಾರ ಹೆಚ್ಚಿನ ಸಿಬ್ಬಂದಿ ಸಹಿತ ಕಾರ್ಯಾಚರಣೆಯನ್ನು ಕೈಗೊಳ್ಳಲು ಶ್ರೀಮಂಗಲ ವನ್ಯಜೀವಿ ವಿಭಾಗದ ವಲಯ ಅರಣ್ಯ ಅಧಿಕಾರಿ ಅರವಿಂದ್ ಅವರಿಗೆ ಸೂಚನೆ ನೀಡಿರುವುದಾಗಿ ಸಂಕೇತ್ ಪೂವಯ್ಯ ಅವರು ತಿಳಿಸಿದರು.