ಕುಶಾಲನಗರ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತು ಪ್ರಕರಣಗಳಲ್ಲಿ ಭಾಗಿಗಳಾದ ಆರೋಪಿಗಳನ್ನು ಸೋಮವಾರಪೇಟೆ ಉಪವಿಭಾಗದ ಡಿಎಸ್‌ಪಿ ಆರ್.ವಿ. ಗಂಗಾಧರಪ್ಪ, ವೃತ್ತ ನಿರೀಕ್ಷಕ ಬಿ.ಜಿ. ಪ್ರಕಾಶ್, ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಯ ಪಿಎಸ್‌ಐ ಹೆಚ್.ಟಿ. ಗೀತಾ ಮತ್ತು ಸಿಬ್ಬಂದಿಗಳ ತಂಡ ಮಾಹಿತಿ ಸಂಗ್ರಹಿಸಿ ತನಿಖೆ ಕೈಗೊಂಡು ಪತ್ತೆ ಹಚ್ಚಿರುತ್ತಾರೆ.
ಕುಶಾಲನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ನಿಷೇಧಿತ ಮಾದಕ ವಸ್ತುವನ್ನು ಮಾರಾಟ/ಸರಬರಾಜು ಮಾಡುತ್ತಿರುವ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಉತ್ತರಪ್ರದೇಶ ರಾಜ್ಯ ಬುಲಂದಶಾಹರ್ ಜಿಲ್ಲೆ ಮೂಲದ ಬೆಡ್ ಶೀಟ್ ವ್ಯಾಪಾರ ಮಾಡುವ ಮೊಹಮ್ಮದ್ ಆಲಂ (32) ಮೋನು (26) ಎಂಬುವವರನ್ನು 550 ಗ್ರಾಂ ನಿಷೇಧಿತ ಮಾದಕ ವಸ್ತು ಗಾಂಜಾದೊಂದಿಗೆ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ ಹಾಗೂ ನ್ಯಾಯಾಲಯದಲ್ಲಿ ಆರೋಪಿಗಳನ್ನು ಸ್ವಯಂ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿರುತ್ತದೆ.
ಮತ್ತೊಂದು ಪ್ರಕರಣ
ದಿ.ನವೆಂಬರ್ 23 ರಂದು ಗುಂಡುರಾವ್ ಬಡವಾಣೆಯ ಜಾತ್ರೆ ಮೈದಾನದಲ್ಲಿರುವ ಸಾರ್ವಜನಿಕ ಶೌಚಾಲಯದ ಬಳಿ ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಈ ಕೆಳಗಿನ ಆರೋಪಿಗಳನ್ನು ಬಂಧಿಸಲಾಗಿದೆ.
ಪ್ರಕರಣಗಳಲ್ಲಿನ ಆರೋಪಿಗಳನ್ನು ಬಂಧಿಸುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ಅಧೀಕ್ಪಕರಾದ
ಕೆ. ರಾಮರಾಜನ್ ರವರು ಶ್ಲಾಘಿಸಿದ್ದಾರೆ.