ಗೋಣಿಕೊಪ್ಪ-ತಿತಿಮತಿ ರಸ್ತೆ ಮತ್ತೊಂದು ಭೀಕರ ಅಪಘಾತಕ್ಕೆ ಸಾಕ್ಷಿಯಾಗಿದೆ.

ಇಲ್ಲಿನ ಭದ್ರಗೋಳದ ಇಳಿಜಾರು ರಸ್ತೆಯಲ್ಲಿ ಸಂಭವಿಸಿದ ಬೈಕ್ ಮತ್ತು ಜೀಪ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಮೃತಪಟ್ಟಿದ್ದಾರೆ. ಮೃತರನ್ನು ಸನತ್ (27) ಮತ್ತು ಜಯ(43) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಗೋಣಿಕೊಪ್ಪ ಪೊಲೀಸರು ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.