ಹಾಸನ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಪಶ್ಚಿಮ ಘಟ್ಟದಲ್ಲಿ ಆನೆಗಳ ಕಾಟ ಜಾಸ್ತಿಯಾಗಿ ನೂರಾರು ಆನೆಗಳು ಗ್ರಾಮಕ್ಕೆ ದಾಳಿ ಇಡುತ್ತಿದೆ. ಈ ಬಗ್ಗೆ ಮಲೆನಾಡು ಭಾಗದ ಶಾಸಕರೊಂದಿಗೆ ಚರ್ಚೆ ನಡೆಸಿದ್ದೇನೆ. ಶೀಘ್ರದಲ್ಲೇ ಮಲೆನಾಡು ಭಾಗದ ಶಾಸಕರ ನಿಯೋಗದೊಂದಿಗೆ ಮುಖ್ಯ ಮಂತ್ರಿಗಳೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ತಿಳಿಸಿದರು. ಅಧಿವೇಶನದಲ್ಲೂ ಪ್ರಸ್ತಾಪ ಮಾಡುತ್ತೇನೆ.ಪ್ರಾಣಿ ಹಾಗೂ ಮನುಷ್ಯರ ನಡುವೆ ಸಂಘರ್ಷ ಜಾಸ್ತಿಯಾಗಿದೆ. ಆನೆಗಳು ನಾಡಿಗೆ ಬಾರದಂತೆ ಆನೆ ಕಂದಕ, ಸೋಲಾರ್ ಭೇಟಿ ಮಾಡಿದರೂ ಪ್ರಯೋಜನವಾಗಿಲ್ಲ. ರೇಲ್ವೆ ಹಳಿಯ ಬ್ಯಾರಿಕೇಡ್ ಸಹ ಮಾಡುತ್ತಿದ್ದೇವೆ ಎಂದರು.