ಮೈಸೂರಿನ ಹುಣಸೂರು ತಾಲೂಕು ಶ್ರೀ ಅಂಜನಾದ್ರಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಹನುಮದ್ ಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ಶ್ರೀ ಆಂಜನೇಯ ಸ್ವಾಮಿಯ ಭವ್ಯ ಮೆರವಣಿಗೆ ಯಾತ್ರೆ ಅದ್ದೂರಿಯಾಗಿ ನಡೆಯಿತು.

ಹನುಮ ಜಯಂತಿಯನ್ನು ಕೊಡಗು -ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಾವಲು ಮೈದಾನದ ವೇದಿಕೆಯಲ್ಲಿ ಜರುಗಿದ ಶ್ರೀ ಆಂಜನೇಯ ಸ್ವಾಮಿಯ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿ, ಕಾರ್ಯಕ್ರಮ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ದಿವ್ಯ ಸಾನಿಧ್ಯ ವಹಿಸಿದ್ದ ಗಾವಡಗೆರ ಶ್ರೀ ಗುರುಲಿಂಗ ಜಂಗಮದೇವರಮಠದ ಶ್ರೀ ನಟರಾಜಸ್ವಾಮಿಗಳು ಮತ್ತು ಮಾದಳ್ಳಿ ಉಕ್ಕಿನಕಂತ ಮಠದ ಶ್ರೀ ಸಾಂಬಸದಾಶಿವ ಸ್ವಾಮಿಗಳುˌ ಶ್ರೀ ರಾಮಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಮಾಜಿ ಸಂಸದ ಪ್ರತಾಪ ಸಿಂಹರˌ ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಡಿ. ಹರೀಶ್ ಗೌಡˌ ಮಾಜಿ ಶಾಸಕ ಎಚ್‌.ಪಿ. ಮಂಜುನಾಥ್ ಮತ್ತು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಮುಖಂಡರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.