ಹಾಸನ ಕೊಡಗು ಗಡಿ ಭಾಗದಲ್ಲಿ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಪಕ್ಷದ ಪರ ಅಬ್ಬರದ ಪ್ರಚಾರದ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.
ಇಲ್ಲಿನ ಬೆಸೂರು ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿನ ದೊಡ್ಡ ಬಂಡಾರ ಗ್ರಾಮದಲ್ಲಿ ಬಿಜೆಪಿಯ ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಗ್ರಾಮದಲ್ಲಿ ಶಾಸಕರು ನಡೆಸಿದ ಅಭಿವೃದ್ಧಿ ಕಾರ್ಯಕ್ಕೆ ಮೆಚ್ಚಿ ಅಪ್ಪಚ್ಚು ರಂಜನ್ ಅವರನ್ನು ಟಾಪ್ ರೂಫ್ ಕಾರಿನಲ್ಲಿ ಬೈಕ್ ಜಾಥಾ ನಡೆಸುವ ಮೂಲಕ ಅಭಿನಂದನೆ ಸಲ್ಲಿಸಿದರು.