ಕಾವೇರಿ ನದಿಯಲ್ಲಿ ಹೆಚ್ಚುತ್ತಿರುವ ಮಾಲಿನ್ಯ ನಿಯಂತ್ರಿಸಲು ಹಾಗೂ ತಡೆಯಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮುಖ್ಯ ಪರಿಸರ ಅಧಿಕಾರಿ ನಿರಂಜನ್ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚಿಸಲಾಗಿದ್ದು, 9 ಮಂದಿ ಒಳಗೊಂಡ ಈ ಸಮಿತಿ ಕಾವೇರಿ ನದಿ ವ್ಯಾಪ್ತಿಯಲ್ಲಿ ಆಗುತ್ತಿರುವ ಮಾಲಿನ್ಯ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಅರಣ್ಯ ಜೀವಿ ಮತ್ತು ಪರಿಸರ ಸಚಿವ ಈಶ್ವರ್ ಕಂಡ್ರೆ ಮಾಹಿತಿ ನೀಡಿದ್ದಾರೆ.

ಕಾವೇರಿ ನದಿ ನೀರು ಕಲುಷಿತ ಸಂಬಂಧ ಸರ್ಕಾರದಿಂದ ತೆಗೆದುಕೊಂಡಿರುವ ಕ್ರಮ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ವಿಧಾನಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಕೇಳಿದ ಪ್ರಶ್ನೆಗೆ ಅರಣ್ಯ ಇಲಾಖೆ ಸಚಿವರು ಮಾಹಿತಿ ನೀಡಿದ್ದಾರೆ.

ತಜ್ಞರ ಸಮಿತಿ ಈಗಾಗ್ಲೇ ಮಾನದಂಡ ಮತ್ತು ರೂಪುರೇಷ ಗಳನ್ನು ಪರಿಗಣಿಸಿ ಅಲ್ಪವಾದಿ ಮತ್ತು ದೀರ್ಘವಾದಿ ಕ್ರಿಯಾಯೋಜನೆ ಬಗ್ಗೆ ಸಮಗ್ರ ಕ್ರಮ ಕೈಗೊಳ್ಳಗುತ್ತಿದೆ ಎಂದರು.