ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಕುಶಾಲನಗರದಲ್ಲಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ
ಕುಶಾಲನಗರ ಪಿ.ಎಂ.ಶ್ರೀ ಸರ್ಕಾರಿ
ಮಾದರಿ ಪ್ರಾಥಮಿಕ ಶಾಲೆಯಲ್ಲಿ
ಡಿ.21 & 22 ರಂದು ( ಶನಿವಾರ ಮತ್ತು ಭಾನುವಾರದಂದು ) ಎರಡು ದಿನಗಳ ಕಾಲ ಕುಶಾಲನಗರದ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ “ರಾಷ್ಟ್ರೀಯ ಭಾವೈಕ್ಯತೆ ಬೆಸುಗೆ ಹಾಗೂ ಸ್ವಚ್ಛತೆಯೇ ಸೇವೆ“ಎಂಬ ಧ್ಯೇಯ ವಾಕ್ಯದೊಂದಿಗೆ
ಕೊಡಗು ಜಿಲ್ಲಾಮಟ್ಟದ‌ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳ ರ್ಯಾಲಿ ( ರ್‍ಯಾಲಿ ) ಏರ್ಪಡಿಸಲಾಗಿದೆ.
ಕುಶಾಲನಗರದಲ್ಲಿ ಬುಧವಾರ ಸಂಜೆ
ನಡೆದ ಮಾಧ್ಯಮ ಗೋಷ್ಠಿ ಯಲ್ಲಿ ಮಕ್ಕಳ
ರ್ಯಾಲಿ ( ರ್‍ಯಾಲಿ ) ಕುರಿತು ಮಾಹಿತಿ ನೀಡಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ
ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ,
ಡಿ.21 ರಂದು ಶನಿವಾರ
ಮಧ್ಯಾಹ್ನ 2.00 ಗಂಟೆಗೆ ನಡೆಯಲಿರುವ ಮಕ್ಕಳ ರ್‍ಯಾಲಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕರ್ನಾಟಕ ರಾಜ್ಯದ ಮುಖ್ಯ ಆಯುಕ್ತರಾದ ಪಿ.ಜಿ.ಆರ್.ಸಿಂಧ್ಯ ಸರ್ ಚಾಲನೆ ನೀಡಲಿದ್ದಾರೆ.

ಮಕ್ಕಳ ರ್ಯಾಲಿಯ ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ ಮಂತರ್ ಗೌಡ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ.ಶಶಿಧರ್,
ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ತಹಶೀಲ್ದಾರ್ ಕಿರಣ್ ಗೌರಯ್ಯ,
ಪುರಸಭೆಯ ಅಧ್ಯಕ್ಷೆ ಜಯಲಕ್ಷ್ಮಿ,
ಡಿಡಿಪಿಐ ಸಿ.ರಂಗಧಾಮಪ್ಪ, ಕೂಡಿಗೆ ಡಯಟ್ ಪ್ರಾಂಶುಪಾಲ ಎಂ.ಚಂದ್ರಕಾಂತ್,
ಬಿಇಓ ಎಸ್.ಭಾಗ್ಯಮ್ಮ, ಶಿಕ್ಷಣ ಇಲಾಖೆಯ ಅಧಿಕಾರಿಗಳು
ಮತ್ತಿತರ ಜನಪ್ರತಿನಿಧಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಮಕ್ಕಳ ರ್‍ಯಾಲಿಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ನ ಶಿಕ್ಷಕರು ಸೇರಿದಂತೆ ಜಿಲ್ಲೆಯ ವಿವಿಧ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಂದ
700 ಮಕ್ಕಳು ಭಾಗವಹಿಸಲಿದ್ದಾರೆ.

ರ್‍ಯಾಲಿ ಅಂಗವಾಗಿ ಮಕ್ಕಳಿಗೆ
ಎರಡು ದಿನಗಳ ಕಾಲ ವಸತಿ ಸೌಕರ್ಯದೊಂದಿಗೆ
ವಿವಿಧ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕುಶಾಲನಗರ ಪಟ್ಟಣದ ಪ್ರಮುಖ ಬೀದಿಯಲ್ಲಿ ಸಾಗಲಿರುವ
ಮಕ್ಕಳ ಬೃಹತ್ ರ್‍ಯಾಲಿಯಲ್ಲಿ ಮಕ್ಕಳು ರಾಷ್ಟ್ರಪ್ರೇಮ, ರಾಷ್ಟ್ರೀಯ ಭಾವೈಕ್ಯತೆ, ಸಮುದಾಯದ ಸಹಬಾಳ್ವೆ, ಸೌಹಾರ್ದತೆ ಬೆಳೆಸುವುದು ಸೇರಿದಂತೆ ನೆಲ- ಜಲ, ಪರಿಸರ, ಅರಣ್ಯ ಸಂರಕ್ಷಣೆ, ಸ್ವಚ್ಛತೆ, ಆಹಾರ ಸಂರಕ್ಷಣೆ ಮತ್ತಿತರ ಪ್ರಮುಖ ಧ್ಯೇಯಗಳೊಂದಿಗೆ ಸಮುದಾಯದಲ್ಲಿ ಜಾಗೃತಿ ಮೂಡಿಸಲಿದ್ದಾರೆ . ರ್ಯಲಿಯ ನಂತರ ವೇದಿಕೆ ಕಾರ್ಯಕ್ರಮದಲ್ಲಿ
ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಧ್ಯೇಯೋದ್ದೇಶಗಳ ಬಗ್ಗೆ ಮಾಹಿತಿ ನೀಡಲಾಗುವುದು . ನಂತರ ರಾತ್ರಿ ಮಕ್ಕಳಿಂದ ಶಿಬಿರಾಗ್ನಿ ನಡೆಸಲಾಗುವುದು. ಡಿ.22 ರಂದು ದೈಹಿಕ ಶಿಕ್ಷಣ ಸಂಪನ್ಮೂಲ ವ್ಯಕ್ತಿ ಡಾ ಸದಾಶಿವಯ್ಯ ಎಸ್.ಪಲ್ಲೇದ್ ಅವರ ನೇತೃತ್ವದಲ್ಲಿ ಗ್ರಾಮೀಣ ಕ್ರೀಡಾಕೂಟ ನಡೆಸಲಾಗುವುದು.
ಡಿ.22 ರಂದು ಅಪರಾಹ್ನ 2.00 ಗಂಟೆಗೆ ಮಕ್ಕಳ ರ್ಯಾಲಿಯ ಸಮಾರೋಪ ಸಮಾರಂಭ ನಡೆಯಲಿದ್ದು, ಇದೇ ವೇಳೆಯಲ್ಲಿ ಸ್ಕೌಟ್ಸ್, ಗೈಡ್ಸ್ ನಲ್ಲಿ ಉತ್ತಮ ಸಾಧಕರನ್ನು ಸನ್ಮಾನಿಸಲಾಗುವುದು
ಎಂದು ಬೇಬಿಮ್ಯಾಥ್ಯೂ ರ್ಯಾಲಿಯ ಮಾಹಿತಿ ನೀಡಿದರು.

ಸ್ಕೌಟ್ಸ್ ಮತ್ತು ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ ಪ್ರವೀಣ್ ದೇವರಗುಂಡ ಸೋಮಪ್ಪ ಮಾತನಾಡಿ, ಕುಶಾಲನಗರದಲ್ಲಿ ಇದೇ ಮೊದಲ ಬಾರಿ ನಡೆಯುತ್ತಿರುವ ಮಕ್ಕಳ ರ್‍ಯಾಲಿಯನ್ನು ಯಶಸ್ವಿಯಾಗಿ ಸಂಘಟಿಸಲು ಶಿಕ್ಷಣ ಇಲಾಖೆ ಸೇರಿದಂತೆ ಸ್ಥಳೀಯ ಜನಪ್ರತಿಗಳು, ಸ್ಥಳೀಯ ದಾನಿಗಳು ಹಾಗೂ ನಾಗರಿಕರು ಉತ್ತಮ ಸ್ಪಂದನೆ ದೊರೆತಿದೆ. ಮಕ್ಕಳಿಗೆ ವಸತಿ ಸೌಲಭ್ಯದೊಂದಿಗೆ ಊಟೋಪಚಾರ ವ್ಯವಸ್ಥೆ ಕಲ್ಪಿಸಲಾಗುವುದು. ಈ ರ್ಯಾಲಿ
(ರ್‍ಯಾಲಿ)ಯನ್ನು ವ್ಯವಸ್ಥಿತವಾಗಿ ಸಂಘಟಿಸಲು
ಶಿಕ್ಷಣ ಇಲಾಖೆ ಮತ್ತು ಪುರಸಭೆಯ ವತಿಯಿಂದ ಉತ್ತಮ ಪ್ರೋತ್ಸಾಹ ನೀಡುತ್ತಿದ್ದು, ರ್ಯಾಲಿಯ ಯಶಸ್ವಿ ಸಂಘಟನೆಗೆ ನಾಗರಿಕರಿಂದ ಹೆಚ್ಚಿನ
ಸಹಕಾರವನ್ನು ನಿರೀಕ್ಷಿಸಲಾಗಿದೆ ಎಂದರು.
ಶಾಲಾ ಮಕ್ಕಳಲ್ಲಿ ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕತೆ ಮತ್ತು ರಾಷ್ಟ್ರೀಯ ಭಾವೈಕ್ಯತೆ ಹಾಗೂ ಸಾಮಾಜಿಕ ಮೌಲ್ಯಗಳನ್ನು
ಬೆಳೆಸುವ ಉದ್ದೇಶ ಹೊಂದಲಾಗಿದೆ ಎಂದು ಡಾ ಪ್ರವೀಣ್ ತಿಳಿಸಿದರು.

ಮಕ್ಕಳ ರ್ಯಾಲಿ (ರ್‍ಯಾಲಿ)ಯ ರೂಪುರೇಷೆಗಳ ಕುರಿತು ಮಾಹಿತಿ ನೀಡಿದ ಜಿಲ್ಲಾ ಸ್ಕೌಟ್ಸ್ ವಿಭಾಗದ ಆಯುಕ್ತ ಜಿಮ್ಮಿ ಸಿಕ್ವೇರಾ, ಶಿಬಿರದಲ್ಲಿ ಡಿ.22 ರಂದು ಬೆಳಿಗ್ಗೆ 7.00 ಗಂಟೆಯಿಂದ ಮಕ್ಕಳಿಗೆ ಬೇಡನ್ ಪೊವೆಲ್ -6

(ಬಿ.ಪಿ.6 ) ನ ವ್ಯಾಯಾಮ ನಡೆಸಲಾಗುವುದು. ನಂತರ
ಮಕ್ಕಳಿಗೆ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯ ಮಹತ್ವ ಹಾಗೂ ಇತಿಹಾಸದ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ಗ್ರಾಮೀಣ ಕ್ರೀಡಾಕೂಟದಲ್ಲಿ ಮಕ್ಕಳಿಗೆ ವಿವಿಧ ಜಾನಪದ ಕ್ರೀಡೆಗಳನ್ನು ಹಮ್ಮಿಕೊಂಡು ಅವರಿಗೆ ಈ ಕ್ರೀಡೆಗಳ ಬಗ್ಗೆ ಮಾಹಿತಿ ನೀಡಲಾಗುವುದು ಎಂದರು.
ಗೋಷ್ಠಿಯಲ್ಲಿ ಸಂಸ್ಥೆಯ ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಜಿ.ಪ್ರೇಮಕುಮಾರ್, ಕೋಶಾಧಿಕಾರಿ ಟಿ.ಎಂ.ಮುದ್ದಯ್ಯ,
ಜಿಲ್ಲಾ ಗೈಡ್ಸ್
ಸಹಾಯಕ ಆಯುಕ್ತೆ ಸಿ.ಎಂ.
ಸುಲೋಚನ, ಕುಶಾಲನಗರ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ ಕೆ.ವಿ.ಅರುಣ್, ಕಾರ್ಯದರ್ಶಿ
ಎಂ.ಎಸ್.ಗಣೇಶ್, ಜಿಲ್ಲಾ ಸ್ಥಾನಿಕ ಆಯುಕ್ತ ಎಚ್.ಆರ್.ಮುತ್ತಪ್ಪ, ಜಿಲ್ಲಾ ಸ್ಕೌಟ್ಸ್ ತರಬೇತಿ ಆಯುಕ್ತ ಕೆ.ಯು.ರಂಜಿತ್, ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ ಇದ್ದರು..