ಕರ್ನಾಟಕ ಸರ್ಕಾರ ಕೃಷಿ ಇಲಾಖೆ ವತಿಯಿಂದ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳ 2025 ರ ಅಂಗವಾಗಿ ಕೊಡಗು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ರೋಡ್ ಶೋ ಕಾರ್ಯಕ್ರಮವನ್ನು ನಾಳೆ ಬೆಳಗ್ಗೆ 7 ಗಂಟೆಗೆ ಕೊಡಗು ಜಿ.ಪಂ.ಸಿಇಒ ಅವರು ಉದ್ಘಾಟಿಸಲಿದ್ದಾರೆ.

ಕಾಲ್ನಡಿಗೆ ಜಾಥಾ ಕಾರ್ಯಕ್ರಮವು ನಗರದ ಕೋಟೆ ಆವರಣದಿಂದ ಗಾಂಧಿ ಮೈದಾನವರೆಗೆ ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಯ ರೈತರು ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಿದೆ.
“ಸಿರಿಧಾನ್ಯ” ಮತ್ತು “ಮರೆತು ಹೋದ ಖಾದ್ಯಗಳ’ ಪಾಕ ಸ್ಪರ್ಧೆಯನ್ನು ಕೃಷಿ ಇಲಾಖೆಯಿಂದ ನಾಳೆ ಬೆಳಗ್ಗೆ 10 ಗಂಟೆಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೆಎಸ್‍ಎಫ್‍ಸಿ ಕಟ್ಟಡ, ಇಂಡಸ್ಟ್ರೀಯಲ್ ಪ್ರದೇಶ ಇಲ್ಲಿ ನಡೆಯಲಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್ ಅವರು ತಿಳಿಸಿದ್ದಾರೆ.