ಬೆಳಗಾವಿ ಅಧಿವೇಶನದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಹಾಗೂ ಜಿಲ್ಲೆಯ ಜಲ್ವಂತ ಸಮಸ್ಯೆಗಳ ಬಗ್ಗೆ ನಡೆದ ಗಂಭೀರ ಚರ್ಚೆಯಲ್ಲಿ ತೊಡಗಿರುವ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರಾದ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ಕ್ಷೇತ್ರದ ಜನತೆ ಅನುಭವಿಸುತ್ತಿರುವ ಗಂಭೀರ ಸಮಸ್ಯೆಗಳಾದ ಸಿ ಮತ್ತು ಡಿ ಜಮೀನಿಗೆ ಸಂಬಂಧಿಸಿದ್ದು, ವಿಪರೀತ ಮಾನವ-ಪ್ರಾಣಿ ಸಂಘರ್ಷ, ತೀವ್ರ ಮಳೆಯಿಂದಾಗಿ ಹದಗೆಟ್ಟ ರಸ್ತೆ ಮತ್ತು ಇನ್ನಿತರ ಮೂಲಭೂತ ಸೌಕರ್ಯಗಳ ಅವಶ್ಯಕತೆಗಳ ಬಗ್ಗೆ, ವಸತಿ ಶಾಲೆಗಳು ಹಾಗೂ ಕ್ರೀಡಾ ಮೈದಾನಗಳ ಅಭಿವೃದ್ಧಿಗೆ ಬೇಕಾದ ಅನುದಾನಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ, ಸಚಿವರುಗಳ ಹಾಗೂ ಸದನದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.