ಬೆಳಗಾವಿ ಅಧಿವೇಶನ ಸಂದರ್ಭ ವಿಧಾನಪರಿಷತ್ ಸದಸ್ಯ ಹಾಗೂ ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಬಂಧನ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಬಿಜೆಪಿ ಪ್ರತಿಭಟನೆ ನಡೆಸಿತು.

ಮಾಜಿ ಶಾಸಕರಾದ ಕೆ. ಜಿ ಬೋಪಯ್ಯ, ಎಂ. ಪಿ ಅಪ್ಪಚ್ಚು ರಂಜನ್, ಮಾಜಿ ಎಂ ಎಲ್ ಸಿ ಸುನಿಲ್ ಸುಬ್ರಮಣಿ ಸೇರಿದಂತೆ ಪಕ್ಷದ ಪ್ರಮುಖರು ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದರು.