ಕ್ರಿಕೆಟರ್ ರಾಬಿನ್ ಉತ್ತಪ್ಪ ತಮ್ಮ ಸ್ವಂತ ಕಂಪನಿಯ ಉದ್ಯೋಗಿಗಳ ಫಿಎಫ್ ಹಣ ಪಾವತಿಸದೇ ವಂಚಿಸಿರುವ ಹಿನ್ನೆಲೆಯಲ್ಲಿ ಈಗ ಮಾಜಿ ಕ್ರಿಕೆಟ್ ಆಟಗಾರ ರಾಬಿನ್ ಉತ್ತಪ್ಪ ಅವರನ್ನು ಬಂಧಿಸುವಂತೆ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿದೆ ಎನ್ನಲಾಗಿದೆ.

Advertisements

ರಾಬಿನ್ ಉತ್ತಪ್ಪ ಸೆಂಚುರಿಸ್ ಲೈಫ್ ಸ್ಟೈಲ್ ಬ್ರಾಂಡ್ ಪ್ರೈವೆಟ್ ಲಿಮಿಟೆಡ್ ಎಂಬ ಖಾಸಗಿ ಕಂಪನಿ ನಡೆಸುತ್ತಿದ್ದರು ಎನ್ನಲಾಗಿದೆ.ಈ ಕಂಪನಿಯಲ್ಲಿ ಕೆಲಸ ಮಾಡುತಿದ್ದ ಕೆಲವು ಉದ್ಯೋಗಿಗಳ ಸಂಬಳದಲ್ಲಿ ಪಿಎಫ್ ಹಣ ಹಾಕದೇ ಸುಮಾರು 23 ಲಕ್ಷ ರೂ ಗಳನ್ನೂ ವಂಚಿಸಿದ್ದಾರೆ ಎಂದು ಉದ್ಯೋಗಿಗಳು ಆರೋಪಿಸಿದ್ದಾರೆ.

ಈಗ ಪಿಎಫ್‌ಓ ರಿಜಿನಲ್ ಕಮಿಷನರ್ ಷಡಾಕ್ಷಿರಿ ರೆಡ್ಡಿ ಅವರು ಡಿಸೆಂಬರ್ 4 ರಂದು ಪುಲಕೇಶಿ ನಗರ ಪೊಲೀಸರಿಗೆ ಪತ್ರ ಬರೆದು ವಾರೆಂಟ್ ಜಾರಿ ಮಾಡಿ ಪೊಲೀಸರಿಗೆ ಅರೆಸ್ಟ್ ಮಾಡುವಂತೆ ಮನವಿ ಮಾಡಿದ್ದಾರೆ.ಈಗ ರಾಬಿನ್ ವಿದೇಶದಲ್ಲಿ ನೆಲೆಸಿರುವುದರಿಂದ ಯಾವ ರೀತಿ ಕ್ರಮವನ್ನು ಪುಲಕೇಶಿ ನಗರ ಪೊಲೀಸರು ತೆಗೆದುಕೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕಾಗಿದೆ.