ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ನೆಲ್ಲಿಹುದಿಕೇರಿಯಾ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಚನ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿದ ಸಾಹಿತಿ ಶ್ರೀ ಕಣಿವೆ ಭಾರದ್ವಾಜ್ ಆನಂದ ತೀರ್ಥ ಮಾತನಾಡಿ, “ಭೂಮಿಯ ಮೇಲಿನ ಸಕಲ ಜೀವಿಗಳಿಗೂ ಬದುಕುವ ಸಮಾನ ಹಕ್ಕನ್ನು ಪ್ರತಿಪಾದಿಸುವ ಶರಣರು ದಯೆಯನ್ನು ಧರ್ಮದ ಮೂಲವಾಗಿಸಿದರು, ಜೊತೆಗೆ ಎಲ್ಲಾ ಧರ್ಮದ ಸಾರವೂ ಇದೇ ಆಗಿದೆ” ಎಂದರು.