ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ‘ಎಕ್ಸ್‍ಪ್ಲೋರಿಂಗ್ ನೇಚರ್ಸ್ ಫಾರ್ಮಸಿ : ಪೊಟೆನ್ಸಿಯಲ್ ಆಫ್ ಮೆಡಿಷಿನಲ್ ಅಂಡ್ ಅರೋಮ್ಯಾಟಿಕ್ ಪ್ಲಾಂಟ್ಸ್ ಅಂಡ್ ದೇರ್ ಕನ್ಸರವೇಷನ್’ ವಿಷಯದ ಮೇಲೆ ಜನವರಿ, 07 ರಿಂದ 9 ರವರೆಗೆ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಅಕಾಡೆಮಿಯ ಕಚೇರಿಯಲ್ಲಿ ಆಯೋಜಿಸಲಾಗಿದೆ.

ಈ ಸಮ್ಮೇಳನದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ತಾಂತ್ರಿಕ ಉಪನ್ಯಾಸಗಳನ್ನು ನೀಡಲಿದ್ದಾರೆ. ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಯುವ ವಿಜ್ಞಾನಿಗಳು, ಶೈಕ್ಷಣಿಕ ತಜ್ಞರು, ಯುವ ಉದ್ಯಮದಾರರು ಭಾಗವಹಿಸಬಹುದು.

ಅಲ್ಲದೇ ಯುವ ವಿಜ್ಞಾನಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳು ರಿಸರ್ಚ್ ಪೇಪರ್ ಪ್ರೆಸೆಂಟೇಷನ್ ಸಹ ಮಂಡಿಸಲು ಅವಕಾಶ ಕಲ್ಪಿಸಲಾಗಿದ್ದು, ಆಯ್ಕೆಯಾದ ರಿಸರ್ಚ್ ಪೇಪರ್‍ಗಳಿಗೆ ನಗದು ಬಹುಮಾನವನ್ನು ನೀಡಲಾಗುವುದು.

ಆಸಕ್ತ ಪ್ರತಿನಿಧಿಗಳು ಡಿಸೆಂಬರ್, 31 ರೊಳಗೆ (Google form-https://forms.gle/JochVVLYyNBHKtdx7) ಮೂಲಕ ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗೆ ಅಕಾಡೆಮಿಯ ಅಧಿಕಾರಿಗಳನ್ನು (ಮೊ.9845258894, 9880405181 ಮತ್ತು 9686449019) ನ್ನು ಅಥವಾ ಅಕಾಡೆಮಿಯ ವೆಬ್‍ಸೈಟ್ https//:kstacademy.in ನ್ನು ವೀಕ್ಷಿಸಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ.ಎಂ.ರಮೇಶ್ ಅವರು ತಿಳಿಸಿದ್ದಾರೆ.