ಕೊಡಗು ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ವಿಧಾನಸಭೆ ಕ್ಷೇತ್ರಗಳು ಹೆಚ್ಚಾಗಬೇಕು ಮತ್ತು ಪ್ರತ್ಯೇಕ ಲೋಕಸಭಾ ಕ್ಷೇತ್ರವಾಗುವ ಅವಶ್ಯಕತೆ ಇದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅಭಿಪ್ರಾಯಪಟ್ಟಿದ್ದಾರೆ.

ಮುಂದಿನ ದಿನಗಳಲ್ಲಿ ಕೊಡಗು ಜಿಲ್ಲೆಯಲ್ಲೂ ಆಮ್ ಆದ್ಮಿ ಪಾರ್ಟಿಯನ್ನು ಜಿಲ್ಲೆಯ ಸಮಸ್ಯೆಯ ಬಗ್ಗೆ ಜನಜಾಗೃತಿ ಮೂಲಕ ಬೆಳೆಸಲಾಗುವುದು hage ರೈತರ ಪರ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಅವರು ತಿಳಿಸಿದ್ದಾರೆ.

ಮಡಿಕೇರಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಜಿಲ್ಲಾ ಪಂಚಾಯತ್ ಮತ್ತು ಗ್ರಾಮ ಪಂಚಾಯ್ತಿ ಗಳಿಗೆ ಚುನಾವಣೆ ನಡೆಸದೆ ಕಡೆಗಣಿಸಲಾಗಿದೆ, ಚುನಾವಣೆ ಶೀಘ್ರವಾಗಿ ನಡೆಸದಿದ್ದರೆ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಬೇಕಾಗಲಿದೆ ಎಂದರು.