ಇದೆ ಡಿಸೆಂಬರ್ 26, 27ರಂದು ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಪಕ್ಷದ ಐತಿಹಾಸಿಕ ಅಧಿವೇಶನದ ಶತಮಾನೋತ್ಸವ ಆಚರಣೆಯ ಪೂರ್ವಭಾವಿ ಸಭೆಯು, ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯರವರ ಗೃಹ ಕಚೇರಿ ಕೃಷ್ಣ ದಲ್ಲಿ ನಡೆಯಿತು.
ಮುಖ್ಯಮಂತ್ರಿಗಳ ನೇತೃತ್ವದಲ್ಲೇ ನಡೆದ ಈ ಸಭೆಯಲ್ಲಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್, ಗೃಹಸಚಿವ ಡಾ| ಜಿ. ಪರಮೇಶ್ವರ, ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರು ಹಾಗೂ ವಿರಾಜಪೇಟೆ ಶಾಸಕರಾದ ಶ್ರೀ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ , ಸಚಿವರುಗಳಾದ ಹೆಚ್.ಕೆ ಪಾಟೀಲ್, ಕೆ.ಜೆ ಜಾರ್ಜ್, ಕೆ.ಎಚ್ ಮುನಿಯಪ್ಪ, ಎನ್.ಎಸ್ ಬೋಸರಾಜು, ಡಾ। ಎಂ.ಸಿ ಸುಧಾಕರ್, ಸಂತೋಷ್ ಲಾಡ್ ಸೇರಿದಂತೆ ಸಂಸತ್ ಸದಸ್ಯರು, ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಈ ಸಭೆಯಲ್ಲಿ ಮುಖ್ಯಮಂತ್ರಿಗಳು ಬೆಳಗಾವಿ ಅಧಿವೇಶನದ ಪೂರ್ವಭಾವಿ ತಯಾರಿಗಳ ಬಗ್ಗೆ ಸಮಗ್ರ ಮಾಹಿತಿಗಳನ್ನು ಪಡೆದರಲ್ಲದೆ, ಅಧಿವೇಶನದ ಯಶಸ್ಸಿಗೆ ಹಲವು ಪ್ರಮುಖ ಸಲಹೆ ಸೂಚನೆಗಳನ್ನು ನೀಡಿದರು ಮತ್ತು ಅಧಿವೇಶನದ ರೂಪೇಶದ ಬಗ್ಗೆ ವಿಸ್ತೃತವಾಗಿ ಚರ್ಚಿಸಿ ಸಲಹೆ ಸೂಚನೆಗಳನ್ನು ಪಡೆದರು.