ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಕುಶಾಲನಗರ ಪಟ್ಟಣದಲ್ಲಿ ಜಿಲ್ಲಾ ಮಟ್ಟದ ಪರಿಸರ ಜಾಗೃತಿ ಜಾಥಾ ನಡೆಸಲಾಯಿತು.

ಜಿಲ್ಲೆಯ ವಿವಿಧ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಂದ ಆಗಮಿಸಿದ್ದ 500ಕ್ಕೂ ಹೆಚ್ಚು ಮಂದಿ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಕುಶಾಲನಗರ ಪಟ್ಟಣದಲ್ಲಿ ಬೃಹತ್ ಪರಿಸರ ಜಾಗೃತಿ ಆಂದೋಲನ ನಡೆಸಿದರು. ಪ್ಲಾಸ್ಟಿಕ್ ಬಳಕೆ ದುಷ್ಪಾರಿಣಾಮ, ನೆಲ ಜಲ ಅರಣ್ಯ ಜೀವಿ ಸಂಕುಲ ಸಂರಕ್ಷಣೆ ಕುರಿತಾದ ಘೋಷಣೆ ಕೂಗುತ್ತಾ ಜಾಗೃತಿ ಮೂಡಿಸಲಾಯಿತು. ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಪ್ರತಿಯೊಬ್ಬರೂ ಪರಿಸರದ ಬಗ್ಗೆ ಕಾಳಜಿ ವಹಿಸಿ ಮುಂದಿನ ಪೀಳಿಗೆಗೆ ಪರಿಸರ ಉಳಿಸುವ ಕಾಳಜಿ ನಮದಾಗಬೇಕು ಎಂದರು.

ವೇದಿಕೆ ಕಾರ್ಯಕ್ರಮ ಉದ್ಘಾಟಿಸಿದ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ. ಜಿ. ಆರ್. ಸಿಂಧ್ಯಾ ಮಾತನಾಡಿ ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಜೊತೆ ಶಿಸ್ತು ಸಂಯಮ, ಉತ್ತಮ ನಾಯಕತ್ವ ಗುಣ, ರಾಷ್ಟ್ರೀಯ ಭಾವೈಕ್ಯತೆ, ಸೌಹಾರ್ದ ಹಾಗೂ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.