ಮುಂದಿನ ವರ್ಷ, 2025ರಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲು ಹಲವು ಜಿಲ್ಲೆಗಳು ತೀವ್ರ ಪೈಪೋಟಿ ನಡೆಸಿ ದ್ದರೂ ಅಂತಿಮವಾಗಿ ಗಡಿನಾಡು ಬಳ್ಳಾರಿಗೆ ಆಯೋಜಕತ್ವದ ಅವಕಾಶ ಲಭಿಸಿದೆ.
87ನೇ ಸಾಹಿತ್ಯ ಸಮ್ಮೇಳನದ ಆಯೋಜಕತ್ವ ದಕ್ಷಿಣ ಕರ್ನಾಟಕಕ್ಕೆ ನೀಡಿದ ಹಿನ್ನೆಲೆಯಲ್ಲಿ ಮುಂದಿನ ಸಮ್ಮೇಳನವನ್ನು ಉತ್ತರ ಭಾಗದವರಿಗೆ ನೀಡಬೇಕು ಎಂಬ ಆಗ್ರಹ ವ್ಯಕ್ತವಾಗಿತ್ತು. ಚಿಕ್ಕಮಗಳೂರು, ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಆತಿಥ್ಯಕ್ಕೆ ಆಸಕ್ತಿ ತೋರಿದ್ದರು. ಅಂತಿಮವಾಗಿ ಗಡಿನಾಡು ಜಿಲ್ಲೆಯಾದ ಬಳ್ಳಾರಿ ಸೂಕ್ತ ಎಂಬ ನಿರ್ಣಯಕ್ಕೆ ಬರಲಾಯಿತು.