ಕುಶಾಲನಗರ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ವ್ಯಕ್ತಿಯೊಬ್ಬರು ಕಾವೇರಿ ನದಿಯಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ನಡೆದಿದೆ.ದೇವಾಲಯ ಮುಂಭಾಗದಲ್ಲಿ ವಾಸವಿದ್ದ ಎಲೆಕ್ಟ್ರಿಷಿಯನ್ ಶರವಣ (46) ಮೃತ ದುರ್ದೈವಿ,ಶನಿವಾರ ಸಂಜೆ ನದಿಯಲ್ಲಿ ಸ್ನಾನಕ್ಕೆ ತೆರಳಿದಾಗ ಆಕಸ್ಮಿಕವಾಗಿ ಮುಳುಗಿ ಸಾವನಪ್ಪಿರುವ ಶಂಕೆ ವ್ಯಕ್ತವಾಗಿದೆ.
ನಾಪತ್ತೆಯಾಗಿದ್ದ ವ್ಯಕ್ತಿ ಶೋಧ ಕಾರ್ಯ ಇಂದು ನಡೆಸಿ ಮೃತದೇಹ ಹೊರ ತೆಗಿಯಲಾಗಿದೆ. ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮ ಕೈಗೊಳ್ಳಲಾಗಿದೆ.