ಕೊಯನಾಡು ಚಡಾವು ತಿರುವಿನಲ್ಲಿ ಸ್ಕೂಟಿ ಮತ್ತು ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟಿ ಸವಾರ ಹಾಗೂ ಹಿಂಬದಿ ಪ್ರಯಾಣಿಸುತ್ತಿದ್ದ ಮಹಿಳೆ ಸಾವನ್ನಪ್ಪಿದ್ದಾರೆ.

ಸುಳ್ಯದಿಂದ ಮಡಿಕೇರಿ ಕಡೆಗೆ ಬರುತ್ತಿದ್ದ ಕಂಟೈನರ್ ಹಾಗೂ ಮಡಿಕೇರಿಯಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಸ್ಕೂಟಿ ನಡುವೆ ಈ ಅವಘಡ ಉಂಟಾಗಿದ್ದು, ಸ್ಕೂಟಿ ಸವಾರ ನೆಲ್ಲಿಹುದಿಕೇರಿಯ ಚಿದಾನಂದ ಆಚಾರ್ಯ ಎಂಬುವವರು ಸ್ಥಳದಲ್ಲಿಯೇ ಉಸಿರು ಚೆಲ್ಲಿದ್ದಾರೆ. ಸ್ಕೂಟಿಯ ಹಿಂಬದಿಯಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದರು.

ಅವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ರವಾನಿಸಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಜೀವತೆತ್ತಿದ್ದಾರೆ ಎಂದು ತಿಳಿದುಬಂದಿದೆ.