ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಇಂದು, ಕ್ರೈಸ್ತ ಧರ್ಮ ಗುರುಗಳ ಆಮಂತ್ರಣ ಮೇರೆಗೆ ವಿರಾಜಪೇಟೆಯ ಸಂತ ಅನ್ನಮ್ಮನ ಚರ್ಚೆಗೆ ಭೇಟಿ ನೀಡಿದ ಶಾಸಕ ಹಾಗೂ ಮುಖ್ಯ ಮಂತ್ರಿಗಳ ಕಾನೂನು ಸಲಹಾಗಾರರದ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ರವರು ಕ್ರಿಸ್ಮಸ್ ಹಬ್ಬಾಚಾರಣೆಯಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಂಜಿ ಪೂಣಚ್ಚ, ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಪುರಸಭೆ ಸದಸ್ಯರು, ಕಾಂಗ್ರೆಸ್ಸಿನ ಹಿರಿಯ, ಕಿರಿಯ ಮುಖಂಡರು ಉಪಸ್ಥಿರಿದರು.