ಪೊನ್ನಂಪೇಟೆ ತಾಲ್ಲೂಕಿನ ಬಾಳೆಲೆ ನಿಟ್ಟೂರು ಸಮೀಪದ ತಟ್ಟಕೆರೆ ಪೈಸೆರಿ
ತೋಟದಲ್ಲಿ ಕಾಫಿ ಕುಯ್ಲು ಮಾಡುತ್ತಿದ್ದ ಸಂದರ್ಭ ಹುಲಿ ದಾಳಿ ಪ್ರಾಣಪಾಯದಿಂದ ಪಾರಾಗಿ ಗಾಯಗೊಂಡ ರಾಜನ್ (48) ರನ್ನು ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ವಿರಾಜಪೇಟೆ ಆಸ್ಪತ್ರೆಯಲ್ಲಿ ಭೇಟಿ ಮಾಡಿ
ಗಾಯಾಳುವಿಗೆ ಧೈರ್ಯ ತುಂಬಿದರು.

ಗ್ರಾಮಸ್ಥರು ಮತ್ತು ಕಾರ್ಮಿಕರಲ್ಲಿ ಭಾರೀ ಆತಂಕ ಮೂಡಿಸಿದ ಹುಲಿ ಸೆರೆ ಹಿಡಿಯಲು ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿದು ಬಂದಿದೆ.