ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ ಗ್ರಾಮ ಪಂಚಾಯ್ತಿಗೆ 2023 ನೇ ಸಾಲಿನ ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿಗೆ ಆಯ್ಕೆಯಾಗಿದೆ.
ರಾಷ್ಟ್ರಮಟ್ಟದ “ನಾನಾಜಿ ದೇಶಮುಖ್ ಸರ್ವೋತ್ತಮ್ ಪಂಚಾಯತ್ ಸತತ ವಿಕಾಸ್ “ಕ್ಕೆ ಭಾಜನವಾದ ಮುಳ್ಳುಸೋಗೆ ಗ್ರಾಮ ಪಂಚಾಯಿತಿ 2021-22 ರಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ರಾಜ್ಯದ ಏಕೈಕ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮುಳ್ಳುಸೋಗೆ ಗ್ರಾಮ ಪಂಚಾಯಿತಿಗೆ ಕೇಂದ್ರ ಸರ್ಕಾರದಿಂದ 1.5 ಕೋಟಿ ರು ಗಳ ಪುರಸ್ಕಾರ ಲಭಿಸಿದ್ದು ಸದ್ಯ ಗ್ರಾಮ ಪಂಚಾಯ್ತಿ ಕುಶಾಲನಗರದ ಪುರಸಭೆ ಅದೀನದಲ್ಲಿದೆ.